SHOCKING NEWS | ಒಡಿಶಾದ ಮಕರ ಮೇಳದಲ್ಲಿ ಕಾಲ್ತುಳಿತ: ಓರ್ವ ಸಾವು, 20 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾದ ಕಟಕ್ ಜಿಲ್ಲೆಯಲ್ಲಿ ಮಕರ ಮೇಳ (Cuttack Makar Mela) ದ ಸಂದರ್ಭದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾದಂಬಾ-ಗೋಪಿನಾಥಪುರ ಟಿ-ಬ್ರಿಡ್ಜ್’ನಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ 45 ವರ್ಷದ ಅಂಜನಾ ಸ್ವೈನ್ ಎಂದು ಗುರುತಿಸಲಾದ ಮಹಿಳೆ ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡ ನಾಲ್ವರನ್ನ ಕಟಕ್ ನಗರದ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾದಂಬಾ-ನರಸಿಂಗಪುರ ಶಾಸಕ ಮತ್ತು ಮಾಜಿ ಸಚಿವ ದೇಬಿ ಪ್ರಸಾದ್ ಮಿಶ್ರಾ ಖಚಿತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!