SHOCKING NEWS | ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಯವ್ಯ ಪಾಕಿಸ್ತಾನದಲ್ಲಿ (Pakistan) ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, ಐವರು ಚೀನಾ ಪ್ರಜೆಗಳು ಸಹಿತ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್, ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದು, ಇದರಿಂದ ಬಾಂಬ್ ಸ್ಫೋಟಗೊಂಡಿದೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಅಲಿ ಗಂದಾಪುರ್ ತಿಳಿಸಿದ್ದಾರೆ.

ದಾಳಿಯಲ್ಲಿ ಐವರು ಚೀನಿ ಪ್ರಜೆಗಳು ಮತ್ತು ಪಾಕಿಸ್ತಾನಿ ಚಾಲಕ ಸಾವಿಗೀಡಾಗಿದ್ದಾನೆ ಎಂದು ಮೊಹಮ್ಮದ್ ಅಲಿ ಗಂಡಾಪುರ್ ಹೇಳಿದ್ದಾರೆ.ಖೈಬರ್ ಪಖ್ತುಂಖ್ವಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!