ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ 10 ಯಾತ್ರಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ದಾಳಿಯ ಕಾರಣ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ವೇಳೆ ತಕ್ಷಣ ತಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು.