ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮುಂಬೈನ ಖ್ಯಾತ ರಿಯಲ್ ಎಸ್ಟೇಟ್ ಡೆವಲಪರ್ ಪರಸ್ ಪೋರ್ವಾಲ್ ಅವರು ಗುರುವಾರ ಕಟ್ಟಡದ 23 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನ ಚಿಂಚ್‌ಪೋಕ್ಲಿ ರೈಲು ನಿಲ್ದಾಣದ ಬಳಿಯ ಶಾಂತಿ ಕಮಲ್ ಹೌಸಿಂಗ್ ಸೊಸೈಟಿ ಕಟ್ಟಡದಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 6 ಗಂಟೆಗೆ ಪರಾಸ್ ಪೋರ್ವಾಲ್ ಜಿಮ್‌ನ ಬಾಲ್ಕನಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಪೊಲೀಸ್ ಅಧಿಕಾರಿಗಳಿಗೆ ಆತ್ಮಹತ್ಯಾ ಪತ್ರವೊಂದು ಸಿಕ್ಕಿದ್ದು, ʻನನ್ನ ಸಾವಿಗೆ ಯಾರೂ ಕಾರಣರಲ್ಲ ಮತ್ತು ಈ ಬಗ್ಗೆ ಯಾರೊಂದಿಗೂ ವಿಚಾರಣೆ ನಡೆಸಬಾರದುʼ ಎಂದು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.