Sunday, October 12, 2025

SHOCKING NEWS | ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್​​​ಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ವಿಜಯ್ ದೇವರಕೊಂಡಗೆ ಯಾವುದೇ ಗಾಯಗಳಾಗಿಲ್ಲ.

ಇಂದು ವಿಜಯ್ ದೇವರಕೊಂಡ ಅವರು ಪುಟ್ಟಪರ್ತಿಗೆ ಭೇಟಿ ನೀಡಿದ್ದರು. ಪುಟ್ಟಪರ್ತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ವಿಜಯ್ ಅವರು ಸತ್ಯ ಸಾಯಿ ಬಾಬಾ ಸಮಾಧಿ ನಮಿಸಿ ಆಶೀರ್ವಾದ ತೆಗೆದುಕೊಳ್ಳಲು ಬಂದಿದ್ದರು. ಅಲ್ಲಿಂದ ವಾಪಸ್ ಹೈದರಾಬಾದ್​​ಗೆ ತೆರಳುವಾಗ ಗದ್ವಾಲ್ ಜಿಲ್ಲೆಯ ಉಂಡವಳ್ಳಿಯಲ್ಲಿ ಕಾರು ಅಪಘಾತಕ್ಕೆ ಒಳಗಾಗಿದೆ.

error: Content is protected !!