Thursday, June 1, 2023

Latest Posts

SHOCKING NEWS | ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಯುವತಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಯುವತಿ ಬಲಿಯಾಗಿರುವ ದುರ್ಘಟನೆ ನಡೆದಿದೆ.

ವಿಧಾನಸೌಧದಿಂದ 200 ಮೀಟರ್ ದೂರದಲ್ಲೇ ಇರುವ ಕೆ.ಆರ್. ವೃತ್ತದ ಬಳಿಯಿರುವ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಕಾರು ಸಿಲುಕಿಕೊಂಡು ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಯುವತಿಯನ್ನು ಭಾನುರೇಖಾ (22) ಎಂದು ಗುರುತಿಸಲಾಗಿದೆ.

ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಬೆಂಗಳೂರಿನ ರಸ್ತೆಗಳ ಪರಿಚಯ ಇಲ್ಲದ್ದರಿಂದ ಮಳೆಯ ನಡುವೆಯೇ ಗೂಗಲ್‌ ಮ್ಯಾಪ್‌ ತೋರಿಸಿದಂತೆ ಅಂಡರ್‌ಪಾಸ್‌ನಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಆದರೆ, ಅಂಡರ್‌ಪಾಸ್‌ನಲ್ಲಿ ಮಳೆಯ ನೀರು ತುಂಬಿಕೊಂಡಿದ್ದು, ಅಲ್ಲಿ ಹೋದ ಕಾರು ಸಂಪೂರ್ಣ ಮುಳುಗಿದೆ. ಅವರನ್ನು ಸ್ಥಳೀಯರು ರಕ್ಷಣೆ ಮಾಡಲು ಮುಂದಾಗಿದ್ದಾರೆ.

ಕಾರಿನಲ್ಲಿ ಸಿಲುಕಿದ್ದ ಯುವತಿ ದುರ್ಮರಣವಾಗಿದ್ದಾಳೆ. ಒಂದೇ ಕುಟುಂಬದ 5 ಮಂದಿ ಸಿಲುಕಿ ದೊಡ್ಡ ಅನಾಹುತ ಸಂಭವಿಸಿದೆ. ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಸ್ಥಳೀಯರು ನೀರಿಗೆ ನುಗ್ಗಿ ಕಾಪಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೀರು ಕುಡಿದ ಯುವತಿ ಉಸಿರಾಟಕ್ಕೆ ಸಮಸ್ಯೆ ಎದುರಾಗಿದೆ. ಅವರನ್ನುಕುಡಲೇ ಹತ್ತಿರವಿದ್ದ ಸೇಂಟ್ ಮಾರ್ಥಾಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!