ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನ್ನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿ ಇರುವ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಹಾರಿ ಪ್ರಯಾಣಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಾದಾವರ ಮತ್ತು ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ಪ್ರಯಾಣಿಕ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ನಮ್ಮ ಮೆಟ್ರೋ ರೈಲಿನ ಅಡಿ ಪ್ರಯಾಣಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಯಾಣಿಕನ ರಕ್ಷಣೆಯಲ್ಲಿ ತೊಡಗಿದ್ದಾರೆ.