October 16, 2026
Friday, October 16, 2026
spot_img

SHOCKING | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಅಪ್ಪಳಿಸಿದ ವಿಮಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೆ ಈಡಾಗಿದೆ.

ನೆಲಕ್ಕೆ ಅಪ್ಪಳಿಸಿದ ವಿಮಾನದ ಹಿಂಭಾಗ

ವಿಮಾನವು ರನ್‌ವೇ ಮೇಲೆ ಇಳಿಯುವ ವೇಳೆ ಅದರ ಹಿಂಭಾಗವು ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

ಲ್ಯಾಂಡಿಂಗ್ ವೇಳೆ ಆಗಿದ್ದೇನು?

ಏರ್ ಇಂಡಿಯಾದ AI2651 ವಿಮಾನವು ಲ್ಯಾಂಡಿಂಗ್ ವೇಳೆ ವಾತಾವರಣದ ಅಡಚಣೆಯಾದ ವೇಕ್ ಟರ್ಬುಲೆನ್ಸ್ ನಿಂದಾಗಿ ಈ ಘಟನೆ ಸಂಭವಿಸಿದೆ. ಇದರಿಂದ ಲ್ಯಾಂಡಿಂಗ್ ಸಮಯದಲ್ಲಿ ವಿಮಾನದ ತಳಭಾಗದ ತುದಿ ನೆಲಕ್ಕೆ ಜೋರಾಗಿ ತಾಗಿದೆ.

ಪೈಲಟ್‌ ಸಮಯಪ್ರಜ್ಞೆಯಿಂದ ಸುರಕ್ಷಿತ ಲ್ಯಾಂಡ್

ಪೈಲಟ್‌ ಸಮಯಪ್ರಜ್ಞೆ ತೋರುವ ಮೂಲಕ ವಿಮಾನವನ್ನು ಸುರಕ್ಷಿತವಾಗಿ ರನ್‌ವೇ ಮೇಲೆ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಯಾವುದೇ ಗಾಯಗಳಿಲ್ಲದೆ ಸುರಕ್ಷಿತರಾಗಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಸ್ಪಷ್ಟಪಡಿಸಿದೆ.

ಘಟನೆಯ ಪರಿಣಾಮವಾಗಿ, ಬೆಂಗಳೂರಿನಿಂದ ದೆಹಲಿಗೆ ಹೋಗುವ ತನ್ನ AI2652 ವಿಮಾನವನ್ನು ರದ್ದುಗೊಳಿಸಲಾಗಿದೆ. ಈ ತಾಂತ್ರಿಕ ಅಡಚಣೆಗೆ ಕಾರಣ ತಿಳಿಯಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Must Read