ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನಿರ್ದೇಶಕ ಗುರುಪ್ರಸಾದ್ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್‌ಮೆಂಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ಗುರುಪ್ರಸಾದ್ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಯನ್ನು ದಿಗ್ಭ್ರಮೆಗೊಳಿಸಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬಂದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.