ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಸಂಕಷ್ಟದಿಂದ ಈಗಾಗಲೇ ದಿನಬಳಕೆ ವಸ್ತುಗಳ ದರ ಏರಿಕೆಯಾಗಿದ್ದು, ಹಾಲಿನ ದರವೂ ಏರಿಕೆಯಾಗುವ ಸಂಭವವಿದೆ. ಕೆಎಂಎಫ್‌ನಿಂದ ಹಾಲಿನ ದರ ಏರಿಕೆ ಬಿಸಿ ತಟ್ಟಲಿದ್ದು, ಲೀಟರ್ ಹಾಲಿನ ದರ 3 ರೂಪಾಯಿ ಏರಿಕೆಗೆ ಚಿಂತನೆ ಮಾಡಲಾಗುತ್ತಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ.
ಇತರೆ ದೇಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಪ್ರತಿ ಲೀಟರ್‌ಗೆ ಮೂರು ರೂಪಾಯಿ ದರ ಏರಿಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷರಿಗೆ 14 ಹಾಲು ಒಕ್ಕೂಟಗಳು ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಜತೆ ಚರ್ಚೆ ನಡೆಸಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.