ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ತಾಲೂಕಿನ ಬೆಳಧರ ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಶಿವಕುಮಾರ್ (27), ಗೋವಿಂದಪ್ಪ (50) ಮತ್ತು ಭೈಚಾರಪುರದ ನಿವಾಸಿ ಶಿವಶಂಕರ್ (30) ಮೃತರು. ಧರ್ಮಸ್ಥಳ ಮಂಜುನಾಥ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಅಪಘಾತದ ನಂತರ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.