ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿವಿ ಚರ್ಚೆಯೊಂದರ ವೇಳೆ ಹಿಂದು ದೇವರ ನಿಂದನೆಗೆ ಪ್ರತಿಯಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ದರ್ಜಿ ಒಬ್ಬರನ್ನು ಮತಾಂಧರು ಹಾಡಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಮತ್ತು ಅದನ್ನು ವಿಡಿಯೋ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ಅಮಾನುಷ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ.
10 ದಿನಗಳ ಹಿಂದೆ ಟೇಲರ್ ಕನ್ಹಯ್ಯಾ ಲಾಲ್ ತೇಲಿ ಎಂಬುವರು ಈ ಪೋಸ್ಟ್ ಮಾಡಿದ್ದು ಅಂದಿನಿಂದ ಬೆದರಿಕೆಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ಕೂಡ ದಾಖಲಿಸಿದ್ದರು.ಮತಾಂಧರ ಈ ಬರ್ಬರ ಕೃತ್ಯದಿಂದ ಇಡಿ ರಾಜಸ್ತಾನ ದಿಗ್ಭ್ರಮೆಗೊಂಡಿದೆ.
೪೦ ವರ್ಷದ ಕನ್ಹಯ್ಯಾಲಾಲ್ ತೇಲಿ ಅವರು ಧನ್ಮಂಡಿಯಲ್ಲಿರುವ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಹೆಸರಿನ ಅಂಗಡಿಯನ್ನು ಹೊಂದಿದ್ದಾರೆ. ಮಂಗಳವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಈ ಹೀನ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಊಹಿಸಲಾಗದ ಕೃತ್ಯ:ಸಿಎಂ
ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದು,ಇದೊಂದು ಊಹಿಸಲಾಗದ ಹೇಯ ಕೃತ್ಯ ಎಂದು ಬಣ್ಣಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬಿಜೆಪಿ ಖಂಡನೆ: ಈ ಹೇಯ ಕೃತ್ಯ ಬಗ್ಗೆ ಬಿಜೆಪಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಾಜಸ್ತಾನದ ಕಾಂಗ್ರೆಸ್ ಸರಕಾರ ವೋಟ್‌ಬ್ಯಾಂಕ್ ರಾಜಕೀಯಕ್ಕಾಗಿ ಮತಾಂಧ ಶಕ್ತಿಗಳಿಗೆ ಬೆಂಬಲ ನೀಡಿದ್ದರಿಂದ ಈ ಅಮಾಯಕನ ಬರ್ಬರ ಹತ್ಯೆಯಾಗಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಸಾಕ್ಷಿ. ಕೂಡಲೇ ದುಷ್ಕರ್ಮಿಗಳನ್ನು ಬಂಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಬಿಜೆಪಿ ಮುಖ್ಯಮಂತ್ರಿ ಗೆಹ್ಲೋಟ್ ಅವರನ್ನು ಆಗ್ರಹಿಸಿದೆ.