ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕನೌಜ್ ರೈಲ್ವೆ ನಿಲ್ದಾಣದ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದ ಪರಿಣಾಮ ಕನಿಷ್ಠ 20 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.
ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ಧಾವಿಸಿದ್ದು,, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಂಟಲ್ ಕುಸಿದಿದೆ. ಹೀಗಾಗಿ ಅವಶೇಷಗಳ ಅಡಿಯಲ್ಲಿ ಹಲವಾರು ಕಾರ್ಮಿಕರು ಸಿಕ್ಕಿಬಿದ್ದಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.