ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ( Bangalore-Mysore Express Highway ) ಭೀಕರ ಅಪಘಾತ ಸಂಭವಿಸಿದೆ.
ಮದ್ದೂರು ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಮೂರ್ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ಮದ್ದೂರಿನ ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಸಮೀಪ ಮುಂದೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಹೋಗುತ್ತಿದ್ದ ಮತ್ತೆರೆಡು ಕಾರುಗಳಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರ್ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಮತ್ತು ವಾಹನ ಸವಾರರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.