ದೇಶದ ಪ್ರಗತಿಗಾಗಿ ಯುವಜನರು ಶ್ರಮಿಸಬೇಕು: ರಾಜ್ಯಪಾಲ ಗೆಹ್ಲೋಟ್

ಹೊಸದಿಗಂತ ವರದಿ, ಮೈಸೂರು:

ಯುವಜನರು ಕೌಶಲ್ಯಭರಿತ ಶಿಕ್ಷಣವನ್ನು ಪಡೆಯುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಭಾನುವಾರ ಮೈಸೂರಿನ ಮುಕ್ತ ಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನ, ಕೌಶಲ್ಯ, ಗುಣಾತ್ಮಕ ಚಿಂತನೆ ಮತ್ತು ಭವಿಷ್ಯ ನಿರ್ಮಾಣ ಇವೆಲ್ಲವೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತವೆ. ರಾಷ್ಟçದ ಪ್ರಗತಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರ ಕೊಡುಗೆ ಅಗತ್ಯ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಾರ್ವಭೌಮ ರಾಷ್ಟ್ರ ವಿಶ್ವಕಲ್ಯಾಣ ಮತ್ತು ವಿಶ್ವಶಾಂತಿಯನ್ನು ಭಾರತ ದೇಶ ಸಾರುತ್ತಿದೆ ಎಂದು ಹೇಳಿದರು.
ಪ್ರಸ್ತುತ ಇಡೀ ವಿಶ್ವವೇ ಪರಿಸರದ ಸಮಸ್ಯೆಗಳನ್ನು ಎದುರಿಸುತ್ತಿದೆ. ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ಲಾಸ್ಟಿಕ್ ಮುಕ್ತ ವಲಯಗಳನ್ನಾಗಿ ಮಾಡುವುದು, ಮಳೆ ನೀರು ಕೊಯ್ಲುಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಆದ್ಯ ಕರ್ತವ್ಯ ನಿಮ್ಮ ಮೇಲಿದೆ ಎಂದರು.
ಉನ್ನತ ಶಿಕ್ಷಣವು ಎಲ್ಲರಿಗೂ ಹಾಗೂ ಎಲ್ಲಾ ಕಡೆಯೂ ಸಿಗಬೇಕೆಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು.
ಮುಕ್ತ ವಿಶ್ವವಿದ್ಯಾನಿಲಯಗಳು ದೂರ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕಳೆದ ಎರಡೂವರೆ ದಶಕಗಳಲ್ಲಿ ದೂರ ಶಿಕ್ಷಣದ ಮೂಲಕ ದೇಶದಾದ್ಯಂತ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ನ್ಯಾಕ್ ಸಂಸ್ಥೆಯಿOದ ಎ ಪ್ಲಸ್ ಮಾನ್ಯತೆ ಪಡೆದಿದೆ ಎಂದು ಹೇಳಿದರು. .
ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಮುಕ್ತ ವಿಶ್ವವಿದ್ಯಾನಿಲಯಗಳು ಕಾರಣವಾಗಿವೆ. ದೂರ ಶಿಕ್ಷಣವು ಪ್ರಸ್ತುತ ಭಾರತೀಯ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉತ್ತಮ ಪರಿಣಾಮ ಬೀರಿದೆ. ಇಂದು ಮಹಿಳೆಯರು ಹೆಚ್ಚು ಪದಕಗಳನ್ನು ಪಡೆದಿರುವುದು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ವಿವೇಕಾನಂದರ ಯುವಕರಿಗೆ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ನೀಡಿದ ಕರೆಯಂತೆ ಎಲ್ಲರೂ ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಘಟಿಕೋತ್ಸವ ಭಾಷಣ ಮಾಡಿದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಅಶೋಕ್ ಎಸ್ ಕಿಣಗಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಕೋರ್ಸ್ಗಳಿಂದ ಉದ್ಯೋಗ ಪಡೆದುಕೊಳ್ಳುವುದು ದುಸ್ತರವಾಗಿರುವುದರಿಂದ ಕೌಶಲ್ಯಾಧಾರಿತ ಶಿಕ್ಷಣ ಪಡೆಯುವುದು ಅಗತ್ಯವಿದೆ. ವಿಶ್ವವಿದ್ಯಾನಿಲಯಗಳು ದೂರ ಶಿಕ್ಷಣದಡಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ವಿವಿಧ ಕೌಶಲ್ಯಾಧಾರಿತ ಶಿಕ್ಷಣಗಳನ್ನು ನೀಡುವುದರೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಕಾರ್ಯೋನ್ಮುಖವಾಗಿದೆ. ಪ್ರತಿಯೊಬ್ಬರು ತಮ್ಮ ವೃತ್ತಿ ಜೀವನಕ್ಕಾಗಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.ಶಿಕ್ಷಣವು ಯಾವಾಗಲೂ ಸಾಮಾಜಿಕ ಪರಿವರ್ತನೆಗೆ ಪ್ರಬಲ ಸಾಧನವಾಗಿದೆ. ಇದು ನಾಗರಿಕತೆಯ ಪ್ರಾರಂಭದಿAದಲೂ ಇದೆ. ದೂರ ಶಿಕ್ಷಣದಿಂದಾಗಿ ಭಾರತದ ಶಿಕ್ಷಣ ವ್ಯವಸ್ಥೆಯು ಹೊಸ ಆಯಾಮವನ್ನು ಪಡೆದುಕೊಂಡಿದೆ. ದೂರಶಿಕ್ಷಣವು ಪ್ರಸ್ತುತ ಭಾರತೀಯ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉತ್ತಮ ಪ್ರವೇಶ ಸಾಧ್ಯತೆ,ತಂತ್ರಜ್ಞಾನ-ವರ್ಧಿತ ಕಲಿಕೆ, ಹೊಂದಿಕೊಳ್ಳುವ ಪ್ರವೇಶ ಪ್ರಕ್ರಿಯೆಗಳು, ವೆಚ್ಚ ಪರಿಣಾಮಕಾರಿ ಶಿಕ್ಷಣ ಮತ್ತು ಸ್ವತಂತ್ರ ಅಧ್ಯಯನಕ್ಕೆ ಉಪಯುಕ್ತ ಸೇರಿದಂತೆ ವಿವಿಧ ದೃಷ್ಟಿಕೋನಗಳಿಂದ ನಿರ್ಣಾಯಕ ಪ್ರಭಾವವನ್ನು ಹೊಂದಿದೆ ಎಂದರು. ದೂರ ಶಿಕ್ಷಣವು ಕೆಲವು ನ್ಯೂನತೆಗಳನ್ನು ಹೊಂದಿದ್ದರೂ, ದೂರಶಿಕ್ಷಣದ ಪ್ರಾಯೋಗಿಕ ಮೌಲ್ಯವನ್ನು ಎಂದಿಗೂ ನಿರಾಕರಿಸಲಾಗುವುದಿಲ್ಲ. ಜ್ಞಾನದ ಸ್ಫೋಟ ಮತ್ತು ತಾಂತ್ರಿಕ ಪ್ರಗತಿಯ ಅಗಾಧ ಪ್ರಭಾವದೊಂದಿಗೆ ಆಧುನಿಕ ಯುಗದಲ್ಲಿರುವುದು ಮುಖ್ಯವಾಗಿದೆ. ಭಾರತೀಯ ಸಮಾಜದ ಹೆಚ್ಚಿನ ಭಾಗಕ್ಕೆ ದೂರಶಿಕ್ಷಣದಿಂದ ಶಿಕ್ಷಣವನ್ನು ಪೂರೈಸಬಹುದು ಎಂದರು.ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಆರ್ಥಿಕ ಹಾಗೂ ಬೋಧನಾ ಸೌಲಭ್ಯಗಳನ್ನು ನೀಡಿ ಸಮಾಜದಲ್ಲಿ ಮುಂಚೂಣಿ ವ್ಯಕ್ತಿಗಳನ್ನಾಗಿಸುವ ಧ್ಯೇಯವನ್ನು ಹೊಂದಿರುತ್ತದೆ ಎಂದು ನುಡಿದರು
ಸಮಾರಂಭದಲ್ಲಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರಣಪ್ಪ ವಿ ಹಲಸೆ, ಕುಲ ಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ,ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ. ಕೆ ಬಿ ಪ್ರವೀಣ, ಪ್ರೊ. ಲಕ್ಷ್ಮಿ ಸೇರಿದಂತೆ ಕರಾಮುವಿ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!