April 29, 2026
Wednesday, April 29, 2026
spot_img

SHOCKING | ಗುಜರಾತ್‌ನ ಪಾವಗಡ ಬೆಟ್ಟದಲ್ಲಿ ರೋಪ್‌ವೇ ಮುರಿದು ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪಾವಗಡ ಬೆಟ್ಟದ ದೇವಾಲಯದಲ್ಲಿ ಭೀಕರ ರೋಪ್‌ವೇ ಅಪಘಾತ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ.

ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಾಲಿಯ ಕೇಬಲ್ ವೈರ್ ತುಂಡಾಗಿ ಮುರಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪಂಚಮಹಲ್ ಡಿಎಸ್‌ಪಿ ಡಾ. ಹರ್ಷ ದುಧತ್ ತಿಳಿಸಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಪಾವಗಡ ಬೆಟ್ಟದ ದೇವಾಲಯವು ಸುಮಾರು 800 ಮೀಟರ್ ಎತ್ತರದಲ್ಲಿದ್ದು, ಯಾತ್ರಿಕರು ಶಿಖರವನ್ನು ತಲುಪಲು ಸುಮಾರು 2,000 ಮೆಟ್ಟಿಲುಗಳನ್ನು ಹತ್ತುವುದು ಅಥವಾ ಕೇಬಲ್ ಕಾರುಗಳನ್ನು ಬಳಸುವುದು ಸಾಮಾನ್ಯ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಶನಿವಾರ ಬೆಳಿಗ್ಗೆಯಿಂದ ಸಾರ್ವಜನಿಕರ ಬಳಕೆಗೆ ರೋಪ್‌ವೇಯನ್ನು ಮುಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !