ಹೊಸದಿಗಂತ ವರದಿ,ಮಡಿಕೇರಿ:
ತಂದೆಯೇ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮರಗೋಡು ಸಮೀಪದ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಂದೇಟಿರ ನಿರನ್ (28) ಸಾವಿಗೀಡಾದ ಯುವಕನಾಗಿದ್ದು, ನಂದೇಟಿರ ಚಿಟ್ಟಿಯಪ್ಪ ಹತ್ಯೆ ಮಾಡಿದ ಆರೋಪಿಯಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್‌ರಾಜನ್ ಭೇಟಿ ನೀಡಿ ಪರಿಶೀಲಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ