SHOCKING | ‘ಸ್ನೇಹಿತರು’ ಸಿನಿಮಾ ಖ್ಯಾತಿಯ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಮನೆಯವರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸೌಂದರ್ಯ ಜಗದೀಶ್ ಅವರ ಆತುರದ ನಿರ್ಧಾರದ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಅವರು ಅಪ್ಪು-ಪಪ್ಪು, ಸ್ನೇಹಿತರು, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವಾರು ಚಿತ್ರಗಳ ನಿರ್ಮಾಪಕರಾಗಿದ್ದಾರೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಇತ್ತೀಚೆಗಷ್ಟೇ ತಮ್ಮ ಮಗಳು ಮಗಳು ಸೌಂದರ್ಯ ಅವರ ಮದುವೆ ಮಾಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!