SHOCKING | ತಿರುಪತಿಯಲ್ಲಿ ಕಾಲ್ತುಳಿತ: ನಾಲ್ವರು ಭಕ್ತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯಲ್ಲಿ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ಇದೀಗ ತಿರುಪತಿಯಲ್ಲಿ ಭಕ್ತಸಾಗರದಿಂದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯವಾಗಿದೆ.

ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರುಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಘಟನೆ ಸಂಭವಿಸಿದೆ.

ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ನಾಲ್ಕು ಮಂದಿ ಸಾವು ಕಂಡಿದ್ದಾರೆ. ಟೋಕನ್‌ಗಾಗಿ 4 ಸಾವಿರಕ್ಕೂ ಅಧಿಕ ಭಕ್ತರು ನೆರೆದಿದ್ದರು ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!