SHOCKING | ರಾಜ್ಯ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು (ಮಾರ್ಚ್​ 11) ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಜುಳಾ ಅವರು ಸ್ಥಳೀಯ ಬಿಜೆಪಿ ನಾಯಕಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರಿನ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!