Monday, December 29, 2025

SHOCKING | ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಮತ್ತು ತಮಿಳು ಧಾರಾವಾಹಿಗಳು ಅಭಿನಯಿಸಿದ್ದ ಕಿರುತೆರೆ ನಟಿ ನಂದಿನಿ ಸಿಎಂ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂದಿನಿ ಅವರು ಇಂದು ಸಂಜೆ ಬೆಂಗಳೂರಿನ ಆರ್​ಆರ್​ ನಗರದಲ್ಲಿ ಸಾವಿಗೆ ಶರಣಾಗಿದ್ದು, ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅಭಿನಯಿಸಿದ್ದರು.

ಇನ್ನು ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು.

error: Content is protected !!