ಹೊಸದಿಗಂತ ವರದಿ, ಮಂಗಳೂರು;
ಉಡುಪಿ ಜಿಲ್ಲೆಯ ಕಾರ್ಕಳದ ಪಾಜಿಗುಡ್ಡೆ ಬಳಿ ಈಚರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಮಗು ಮತ್ತು ಮಹಿಳೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.