ಹೊಸದಿಗಂತ ವರದಿ, ವಿಜಯಪುರ:
ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ, ಬಸ್ ಸುಟ್ಟು ಭಸ್ಮವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಹಾಗೂ ಹಂಚಿನಾಳ ರಸ್ತೆಯಲ್ಲಿ ನಡೆದಿದೆ.
ಸಾರಿಗೆ ಬಸ್, ಬೈಕ್ ಡಿಕ್ಕಿಯಾಗುತ್ತಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಧಗಧಗ ಹೊತ್ತಿ ಉರಿದಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ.
ಬಸ್ ಗೆ ಬೆಂಕಿ ಹೊತ್ತಿರುವ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿನ ನಂದಿಸುತ್ತಿದ್ದಂತೆ, ಬಸ್ ಸುಟ್ಟು ಕರಕಲಾಗಿದೆ.
ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಬೈಕ್ ಸವಾರನ ಹೆಸರು, ವಿಳಾಸ ಪತ್ತೆಯಾಗಿಲ್ಲ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.