ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಎಕ್ಸ್ ಯುವಿ 700 ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.