September 27, 2026
Sunday, September 27, 2026
spot_img

SHOCKING | ಸೋಮವಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಮಾಜಿ ಯೋಧ ದುರ್ಮರಣ

ಹೊಸ ದಿಗಂತ ವರದಿ, ಸೋಮವಾರಪೇಟೆ:

ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಸಿ ಆರ್ ಪಿ ಎಫ್ ನ ಮಾಜಿ ಯೋಧರೊಬ್ಬರು ಸಾವನಪ್ಪಿರುವ ಘಟನೆ ಸಮೀಪದ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ.

ಹೆಚ್.ಎ.ವೆಂಕಟೇಶ್(64) ಮೃತ ದುರ್ದೈವಿ.

ಮನೆಯಲ್ಲೇ ತೋಟ ಬಳಕೆಯ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ವೆಂಕಟೇಶ್ ಅವರು ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಸ್ಥಳದಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮನೆಯ ಮೇಲಿನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಧಾವಿಸಿ ಬಂದ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಗಲೇ ವೆಂಕಟೇಶ್ ಅವರು ಸಾವನ್ನಪ್ಪಿದ್ದರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Must Read