SHOCKING | ಸೋಮವಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಮಾಜಿ ಯೋಧ ದುರ್ಮರಣ

ಹೊಸ ದಿಗಂತ ವರದಿ, ಸೋಮವಾರಪೇಟೆ: ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಸಿ ಆರ್ ಪಿ ಎಫ್ ನ ಮಾಜಿ ಯೋಧರೊಬ್ಬರು ಸಾವನಪ್ಪಿರುವ ಘಟನೆ ಸಮೀಪದ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ. ಹೆಚ್.ಎ.ವೆಂಕಟೇಶ್(64) ಮೃತ ದುರ್ದೈವಿ. ಮನೆಯಲ್ಲೇ ತೋಟ ಬಳಕೆಯ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ವೆಂಕಟೇಶ್ ಅವರು ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಸ್ಥಳದಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ … Continue reading SHOCKING | ಸೋಮವಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಮಾಜಿ ಯೋಧ ದುರ್ಮರಣ