ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾರ್ಮರ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹರಿಯಾಣ-ರಾಜಸ್ಥಾನ ಗಡಿ ಬಳಿಯ ನೌಗಾಂವ್‌ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಸಿಂಗ್ ಮತ್ತು ಅವರ ಮಗ ಕಾರಿನಲ್ಲಿ ಇದ್ದರು. ಅವರ ಮಗ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಾನವೇಂದ್ರ ಸಿಂಗ್ ಅವರು ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಹಣಕಾಸು, ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಬಿಜೆಪಿಯ ಮಾಜಿ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರರಾಗಿದ್ದಾರೆ.