Sunday, October 26, 2025

SHOCKING | ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಕಂಟೇನರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೇನರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನದೊಡ್ಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಇಳಿಜಾರು ರಸ್ತೆಯ ಪಕ್ಕದ ಕಂದಕಕ್ಕೆ ಕಂಟೇನರ್ ಉರುಳಿ ಬಿದ್ದಿದೆ. ಕಂಟೇನರ್ ಕೆಳಗೆ ಇಬ್ಬರ ಮೃತ ದೇಹಗಳು ಸಿಲುಕಿಕೊಂಡಿವೆ. ಇನ್ನು ಘಟನೆಯಲ್ಲಿ ಕಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!