Friday, June 9, 2023

Latest Posts

SHOCKING | ಬರೆ ಜರಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರ ಬಳಿಯ ಗುರುಂಪು ಎಂಬಲ್ಲಿ ಬೃಹತ್ ಎತ್ತರದ ಮಣ್ಣಿನ ಬರೆ ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಮಹಿಳೆ ಸೇರಿದಂತೆ ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಗುರುಂಪು ನಿವಾಸಿ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ಮಣ್ಣು ತೆಗೆದು ಬೃಹತ್ತಾದ ಬರೆ ಉಂಟಾಗಿದ್ದು, ಅದರ ಕೆಳಭಾಗದಲ್ಲಿ ತಡೆಗೋಡೆ ನಿರ್ಮಿಸಲು ಪಿಲ್ಲರ್ ಹಾಕುವ ಕಾಮಗಾರಿ ನಡೆಯುತ್ತಿತ್ತು. ಮಧ್ಯಾಹ್ನ ವೇಳೆಗೆ ಇದ್ದಕ್ಕಿದ್ದಂತೆ ಮೇಲಿನಿಂದ ಬರೆಯ ಮಣ್ಣು ಕುಸಿದು ಬಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಕುಸಿದ ಮಣ್ಣಿನಡಿ ಸಿಕ್ಕಿಹಾಕಿಕೊಂಡರೆನ್ನಲಾಗಿದೆ.

ಘಟನೆ ತಿಳಿದು ಸ್ಥಳಿಯರು, ಜನಪ್ರತಿನಿಧಿಗಳು, ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ತರಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಸುಮಾರು ಒಂದೂವರೆ ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಮೂವರ ದೇಹಗಳನ್ನು ಹೊರತೆಗೆಯಲಾಯಿತು.ಆದರೆ ಆ ವೇಳೆಗಾಗಲೇ ಮೂವರೂ ಮೃತಪಟ್ಟಿದ್ದರು. ಮೃತಪಟ್ಟವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಅವರು ಗದಗ ಜಿಲ್ಲೆಯ ಮುಂಡರಗಿಯ ಸೋಮಶೇಖರ ಹಾಗೂ ಅವರ ಪತ್ನಿ ಶಾಂತಾ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!