ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕುಂದಾಪುರದ ಗೋಪಾಡಿ ಸಮುದ್ರದಲ್ಲಿ ಭಾನುವಾರ ಈಜಲು ತೆರಳಿದ್ದ ಏಳು ಜನರಲ್ಲಿ ಮೂವರು ನೀರುಪಾಲಾದ ಘಟನೆ ನಡೆದಿದೆ.
ಬೆಂಗಳೂರಿನಿಂದ ಬಂದಿದ್ದ ಹತ್ತು ಮಂದಿಯಲ್ಲಿ ಏಳು ಮಂದಿ ಯುವಕರು ಕಡಲಿಗಿಳಿದಿದ್ದು, ಮೂವರು ಸಮುದ್ರ ಪಾಲಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ.