Thursday, February 29, 2024

SHOCKING | ಓಮ್ನಿ ವ್ಯಾನ್ ನ ಟೈಯರ್ ಸ್ಫೋಟ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ವಾಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಯಾದಗಿರಿಯ ಚಿತ್ತಾಪುರದಲ್ಲಿ ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ವ್ಯಾನ್ ಉರುಳಿ ಬಿದ್ದಿದೆ. ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿರೋ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಓಮ್ನಿ ವ್ಯಾನ್ ಒಂದರ ಟೈಯರ್ ಸ್ಪೋಟಗೊಂಡಿದೆ. ಈ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೆ ಪಲ್ಟಿಯಾಗಿದೆ.ಓಮ್ನಿ ವ್ಯಾನ್ ಪಲ್ಟಿಯಾದ ಪರಿಣಾಮ ಅದರೊಟ್ಟಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದಂತ ವಾಹನ ಸಾವರರು ಓಮ್ನಿ ವ್ಯಾನಿನಲ್ಲಿದ್ದಂತ ಓರ್ವನನ್ನು ಹೊರಗೆ ಎಳೆದುಕೊಂಡಿದ್ದಾರೆ. ಓಮ್ನಿ ವ್ಯಾನ್ ಸಂಪೂರ್ಣವಾಗಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿದೆ.

ಈ ಅವಗಢದಲ್ಲಿ ಗಾಯಗೊಂಡಿದ್ದ ಓರ್ವ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದಂತ ಚಿತ್ತಾಪುರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಮ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!