SHOCKING | ಪಶ್ಚಿಮ ಬಂಗಾಳದಲ್ಲಿ ಹಾಡಹಗಲೇ TMC ನಾಯಕನ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಲ್ಲಿ ಹಾಡಹಗಲೇ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಕೃತ್ಯವೆಸಗಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸತ್ಯನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚೌಧರಿ ಮುರ್ಷದಾಬಾದ್​ನ ಬಹರಂಪುರ ನಿವಾಸಿ, ಆ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಸತ್ಯನ್ ಮನೆ ಸಮೀಪ ಫ್ಲ್ಯಾಟ್‌ನ ಕೆಳಗಿರುವ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸತ್ಯನ್‌ನ ಮೇಲೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಘಟನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರವ ಮೌನ ಮನೆ ಮಾಡಿದೆ. ಘಟನೆಯಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!