ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿತದ ಪರಿಣಾಮ, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು,ಮತ್ತೋರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿ ಸಿಲುಕಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಸುದ್ದಗುಂಟೆ ಪಾಳ್ಯದಲ್ಲಿರುವಂತ ನಿರ್ಮಾಣ ಹಂತದ ಕಟ್ಟಡವೊಂದು ಕುಸಿತಗೊಂಡಿದೆ.ಇದರಿಂದಾಗಿ ಅದರಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಬಿರಾಹ ಮೂಲಕ ಕಾರ್ಮಿಕನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ. ಇನ್ನೂ ಕೆಲವು ಕಾರ್ಮಿಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರೋದಾಗಿ ಹೇಳಲಾಗುತ್ತಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.