ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ 300 ಅಡಿ ಆಳದ ರ‍್ಯಾಟ್ ಹೋಲ್ ಮೈನಿಂಗ್ ಒಂದರಲ್ಲಿ ನೀರು ತುಂಬಿದ್ದು, ಸುಮಾರು 18 ಕಾರ್ಮಿಕರು ಸಿಲುಕಿದ್ದಾರೆ.
ಕ್ವಾರಿಯಲ್ಲಿ ಸುಮಾರು 100 ಅಡಿ ನೀರು ತುಂಬಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು. ಎರಡು ಪಂಪ್‌ಗಳನ್ನು ಬಳಸಿಕೊಂಡು ನೀರನ್ನು ಖಾಲಿ ಮಾಡುತ್ತಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಧಾವಿಸಿವೆ.
ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆಯ ನೆರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.