ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹಣೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಕ್ತ ಸೋರುತ್ತಿರುವ ಚಿತ್ರವನ್ನು ತೃಣಮೂಲ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಮನೆಯ ಆವರಣದಲ್ಲಿ ನಡೆದಾಡುತ್ತಿರುವ ವೇಳೆ ಆಯ ತಪ್ಪಿ ಬಿದ್ದು ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಬಿದ್ದ ರಭಸಕ್ಕೆ ಮಮತಾ ಹಣೆಗೆ ಗಂಭೀರವಾದ ಗಾಯವಾಗಿದೆ.ಗಾಯದ ಪ್ರಮಾಣ ಹೆಚ್ಚಾಗಿರುವ ಕಾರಣ ಹಣೆಗೆ ಸ್ಟಿಚ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
Our chairperson @MamataOfficial sustained a major injury.
Please keep her in your prayers 🙏🏻 pic.twitter.com/gqLqWm1HwE— All India Trinamool Congress (@AITCofficial) March 14, 2024