ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತಿನ ಗಾಂಧಿನಗರದ 70 ವರ್ಷದ ವ್ಯಕ್ತಿಯೊಬ್ಬರಿಗೆ ಝಿಕಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ.
ನಾಲ್ಕು ದಿನಗಳ ಹಿಂದೆ ಝಿಕಾ ವೈರಸ್ ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಗುಜರಾತ್ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ಟೋಬರ್ 24ರಂದು ನೆಗಡಿ, ಜ್ವರ, ಕೀಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ವ್ಯಕ್ತಿ ಗಾಂಧಿನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ದೇಹದ ಕೆಲ ದ್ರವರೂಪದ ಮಾದರಿಯನ್ನು ಪುಣೆಯಲ್ಲಿನ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಅದರ ವರದಿ ನಾಲ್ಕು ದಿನಗಳ ಹಿಂದೆ ಬಂದಿದ್ದು, ಅವರಿಗೆ ಝಿಕಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.