ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.
ಇನ್ನು, ಎಲ್ಲಾ 40 ಜನರ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಯೇ ಸಾವನ್ನಪ್ಪಿರೋದು ಅಂತ ದೃಢವಾಗಿದೆ. ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ.. ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ. ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಪ್ರಕಟಿಸಿದೆ.