ಚಪ್ಪಲಿ ಎಸೆತ ಘಟನೆ: ಬೆಂಬಲಕ್ಕೆ ನಿಂತ ಚಿತ್ರರಂಗಕ್ಕೆ ನಟ ದರ್ಶನ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸ್ಯಾಂಡಲ್ ವುಡ್ ನಟ ದರ್ಶನ್ ಮೇಲೆ ಇತ್ತೀಚೆಗೆ ಚಪ್ಪಲಿ ಎಸೆದ ಕುರಿತು ಇಡೀ ಚಿತ್ರರಂಗವೇ ಆಕ್ರೋಶ ವ್ಯಕ್ತಪಡಿಸಿದ್ದು, ಆದ್ರೆ ಈ ಕ್ಷಣ ಮೌನ ವಹಿಸಿದ ದರ್ಶನ ಇದೀಗ ಘಟನೆ ಕುರಿತು ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ .

ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ.ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೇ ಹೊರತೂ ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಪ್ರತಿಯೊಬ್ಬ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು. ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು ಎಂದು ಮಾಡಿದ್ದಾರೆ.

ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ, ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ನಮ್ಮ ಕೋಟ್ಯಾಂತರ ಸೆಲೆಬ್ರಿಟಿಗಳಿರುತ್ತಾರೆ. ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!