September 28, 2026
Monday, September 28, 2026
spot_img

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಆರು ಜನರನ್ನು ಅರೆಸ್ಟ್‌ ಮಾಡಿದ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹರಿಯಾದ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಆರೋಪಿ ದೀಪಕ್ ಶರ್ಮಾ ಮತ್ತು ಇತರ ಐವರ ಬಂಧನದೊಂದಿಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 11 ಜನರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮುಂಬೈಗೆ ಕರೆತರಲಾಗಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ ಮೊದಲ ದಿನ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರೋಹಿತ್‌ ಶೆಟ್ಟಿ ಮನೆ ಮೇಲೆ ದಾಳಿ ನಡೆಸಲಾಗಿತ್ತು.

Must Read