CINE | ಗುಂಡಿನ ದಾಳಿ, ಅಪಾರ್ಟ್‌ಮೆಂಟ್‌ ಖಾಲಿ ಮಾಡಿದ ಸಲ್ಲು?

ಹೊಸದಿಗಂ  ತ ಡಿಜಿಟಲ್‌ ಡೆಸ್ಕ್‌: 

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಗುಂಡಿನ ದಾಳಿಯ ನಂತರ ಅವರ ಕುಟುಂಬ ಸಾಕಷ್ಟು ಆತಂಕ್ಕೆ ಒಳಗಾಗಿದ್ದು ಅಪಾರ್ಟ್‌ಮೆಂಟ್‌ ಬದಲಾವಣೆ ಮಾಡೋ ನಿರ್ಧಾರಕ್ಕೆ ಬಂದಿದೆ.

ಸಲ್ಮಾನ್ ಹತ್ಯೆ ಮಾಡಲು ನಾನಾ ರೀತಿಯ ಕಸರತ್ತುಗಳನ್ನು ದುರುಳರು ಮಾಡುತ್ತಿದ್ದಾರೆ. ಹಾಗಾಗಿ ತಾವಿರುವ ಅಪಾರ್ಟ್ಮೆಂಟ್ ಅನ್ನು ಖಾಲಿ ಮಾಡಲು ಸಲ್ಮಾನ್ ನಿರ್ಧರಿಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತು ಸಲ್ಮಾನ್ ಸಹೋದರ ಅರ್ಬಾಜ್ ಮಾಹಿತಿ ನೀಡಿದ್ದು, ಅಂತಹ ಯೋಚನೆ ಸದ್ಯಕ್ಕಿಲ್ಲ ಅಂದಿದ್ದಾರೆ.

ಗುಂಡಿನ ದಾಳಿಯನ್ನು ಮುಂಬೈ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈಗಾಗಲೇ ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿದೆ. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದೀಗ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!