ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ನೈಟ್ ಕ್ಲಬ್ ನಲ್ಲಿ ಗುಂಡಿನ ದಾಳಿ ನಡೆದಿದ್ದು , ಐದು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಕೊಲೊರಾಡೋದ ಕೊಲೊರಾಡೋ ಸ್ಪ್ರಿಂಗ್ಸ್ ನಲ್ಲಿ ಪೊಲೀಸರು ಭಾನುವಾರ ಹೇಳಿದ್ದಾರೆ.
ಶನಿವಾರ ಮಧ್ಯರಾತ್ರಿಯ ಮೊದಲು ಕ್ಲಬ್ ಕ್ಯೂನಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೊದಲ ವರದಿಯನ್ನು ಸ್ವೀಕರಿಸಿದ್ದಾರೆ. ಭಾನುವಾರ ಯುಎಸ್ನ ಕೊಲೊರಾಡೋ ಸ್ಪ್ರಿಂಗ್ಸ್ನಲ್ಲಿರುವ ಸಲಿಂಗಕಾಮಿ ನೈಟ್ಕ್ಲಬ್ನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ.