ಗುಂಡಿನ ದಾಳಿ ಕೇಸ್: ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್;

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಡದಿ ಠಾಣೆಯ ಪೊಲೀಸರು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಎರಡನೇ ಪತ್ನಿಗೂ ಪೊಲೀಸರು ನೋಟಿಸ್ ನೀಡಿದ್ದರು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಇದೀಗಮೇ.7ರ ಬುಧವಾರದಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಡದಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಗುಂಡಿನ ದಾಳಿ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೈ ಹಾಗೂ ಮೂಗಿನ ಭಾಗಕ್ಕೆ ಗಂಭೀರವಾದಂತ ಗಾಯವಾಗಿತ್ತು. ಆ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!