ಅಮೆರಿಕಾದಲ್ಲಿ ಗುಂಡಿನ ದಾಳಿ: ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಅಮೆರಿಕಾದ ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ರೌಂಡ್ ರಾಕ್‌ನಲ್ಲಿರುವ ಉದ್ಯಾನವನದಲ್ಲಿ ಶನಿವಾರ ರಾತ್ರಿ ಮನರಂಜನೆ ಕಾರ್ಯಕ್ರಮ ಏರ್ಪಡಿಸಿದ್ದು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಕಾರ್ಯಕ್ರಮದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಆಗ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿತು. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆರೋಪಿಗಳು ಆ ವೇಳೆ ಪರಾರಿಯಾಗಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!