July 13, 2026
Monday, July 13, 2026
spot_img

ಬ್ರಿಟಿಷ್ ಕೊಲಂಬಿಯಾದಲ್ಲಿ ಗುಂಡಿನ ದಾಳಿ: 10 ಮಂದಿ ಸಾ*ವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಂತವಾಗಿದ್ದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಪಟ್ಟಣದ ಶಾಲೆಯೊಂದು ಗುಂಡಿನ ಸದ್ದಿಗೆ ನಡುಗಿಹೋಗಿದೆ. ಅಪರಿಚಿತ ದುಷ್ಕರ್ಮಿಯೊಬ್ಬರು ನಡೆಸಿದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಶಾಲೆಯ ಆವರಣದಲ್ಲಿ ಏಕಾಏಕಿ ನಡೆದ ಈ ದಾಳಿಯಿಂದ ಜನ ದಿಕ್ಕೆಟ್ಟು ಓಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಕೃತ್ಯ ಎಸಗಿದ ಶಂಕಿತ ಮಹಿಳಾ ದಾಳಿಕೋರಳು ಸಹ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಗಾಯಗೊಂಡ ಸುಮಾರು 24 ಜನರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರನ್ನು ಹೆಲಿಕಾಪ್ಟರ್ ಮೂಲಕ ತುರ್ತು ಚಿಕಿತ್ಸೆಗೆ ರವಾನಿಸಲಾಗಿದೆ. ಚಿಕಿತ್ಸೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಟಂಬ್ಲರ್ ರಿಡ್ಜ್ ಸುತ್ತಮುತ್ತಲಿನ ನಿವಾಸಿಗಳಿಗೆ ತುರ್ತು ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ:

ಜನರು ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಮನೆಗಳ ಬಾಗಿಲನ್ನು ಸರಿಯಾಗಿ ಲಾಕ್ ಮಾಡಿಕೊಳ್ಳಲು ಮತ್ತು ಯಾವುದೇ ವ್ಯವಹಾರಕ್ಕಾಗಿ ಹೊರಹೋಗದಂತೆ ವಿನಂತಿಸಲಾಗಿದೆ. ಸಾರ್ವಜನಿಕರು ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಾಕೀತು ಮಾಡಲಾಗಿದೆ.

ದಾಳಿಯ ಹಿಂದಿನ ನಿಖರ ಉದ್ದೇಶ ಮತ್ತು ಸಂದರ್ಭಗಳ ಬಗ್ಗೆ ತನಿಖೆ ಮುಂದುವರಿದಿದ್ದು, ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !