ನಟ ಸಲ್ಮಾನ್​ ಖಾನ್ ಮನೆಯ ಬಳಿ ಗುಂಡಿನ ದಾಳಿ: ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಾಲಿವುಡ್​ ನಟ ಸಲ್ಮಾನ್​ ಖಾನ್ (Salman Khan) ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ (Firing at Salman Khan house) ಸಂಬಂಧಿಸಿದಂತೆ ಪೊಲೀಸರು ಪಂಜಾಬ್​ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

ಈ ಆರೋಪಿಗಳು ಗುಂಡಿನ ದಾಳಿ ನಡೆಸಿದವರಿಗೆ ಗನ್​ಗಳನ್ನು ನೀಡಿದ್ದರು.

ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಎಂಬಿಬ್ಬರು ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!