ಹೊಸದಿಗಂತ ಡಿಜಿಟಲ್ ಡೆಸ್ಕ್:
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಚಿತ್ರ ಚಿತ್ರೀಕರಣ ಮುಕ್ತಾಯವಾಗಿದೆ.
ಪವರ್ ಸ್ಟಾರ್ ಸಾವಿಗೂ ಮುನ್ನ ನಟಸಿದ ಬಹು ನಿರೀಕ್ಷಿತ ಚಿತ್ರ ಜೇಮ್ಸ್ ಶೂಟಿಂಗ್ ಈಗ ಮುಕ್ತಾಯಗೊಂಡಿದೆ. ಪುನೀತ್ ಅಗಲಿಕೆಯ ಕಾರಣ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರ ಚೇತನ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಕಿಶೂರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಗೆ ಜೋಡಿಯಾಗಿ ನಟಿ ಪ್ರಿಯಾ ಆನಂದ್ ಆಭಿನಯಿಸಿದ್ದು, ತೆಲುಗು ನಟ ಶ್ರೀಕಾಂತ್, ಚಿಕ್ಕಣ್ಣ, ಅವಿನಾಶ್ ರಂತಹ ಕಲಾವಿದರು ಈ ಚಿತ್ರದಲ್ಲಿದ್ದಾರೆ.
ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಪುನೀತ್ ಅವರಿಗೆ ಧ್ವನಿ ನೀಡುವ ಸಾಧ್ಯತೆ ಇದ್ದು, ಪುನೀತ್ ಅವರ ಹುಟ್ಟುಹಬ್ಬದ ದಿನವೇ (ಮಾ.17) ಜೇಮ್ಸ್ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.