ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಕ್ಸಿಕೋದ ಹಿಂಸಾಚಾರ ಪೀಡಿತ ರಾಜ್ಯವಾದ ಗುವಾನಾಜುವಾಟೊದಲ್ಲಿ ಧಾರ್ಮಿಕ ಆಚರಣೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, 20 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯ ಮೆಕ್ಸಿಕೋದ ಹಿಂಸಾಚಾರ ಪೀಡಿತ ಇರಾಪುವಾಟೊ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರಲ್ಲಿ 17 ವರ್ಷದ ಬಾಲಕನೂ ಸೇರಿದ್ದಾನೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಹಿಂಸಾಚಾರ ಮತ್ತು ಗ್ಯಾಂಗ್ ಚಟುವಟಿಕೆಗೆ ಹೆಸರುವಾಸಿಯಾಗಿರುವ ಗುವಾನಾಜುವಾಟೊ ರಾಜ್ಯದಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಜನರು ಜಾನ್ ದಿ ಬ್ಯಾಪ್ಟಿಸ್ಟ್ ಅವರ ಜನ್ಮದಿನದಂದು ಧಾರ್ಮಿಕ ಆಚರಣೆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ವಸತಿ ಸಂಕೀರ್ಣದಲ್ಲಿ ಪಾರ್ಟಿ ಮತ್ತು ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ವೇಳೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.