ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಕೇಶ್ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.