ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು ಇಪ್ಪತ್ತಕ್ಕೂ ಹೆಚ್ಚು ಬೀದಿ ಶ್ವಾನಗಳನ್ನು ಆಗಂತುಕರು ಗುಂಡು ಹಾರಿಸಿ ಕೊಲೆಗೈದ ಪೈಶಾಚಿಕ ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪೊನ್ನಕಲ್‌ನಲ್ಲಿ ನಡೆದಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಈ ಕೃತ್ಯವೆಸಗಿದ್ದಾರೆ ಎಂದು ಹೇಳಿದ್ದಾರೆ.
ಆಗಂತುಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 429 (ಪ್ರಾಣಿಗಳನ್ನು ಕೊಲ್ಲುವುದು ಅಥವಾ ಅಂಗವಿಕಲಗೊಳಿಸುವುದು), ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಯಡಿ ಅಡ್ಡಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶ್ವಾನ ಹತ್ಯೆಯ ರೂವಾರಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.