Tuesday, August 16, 2022

Latest Posts

ಅಮೆರಿಕದ ಸ್ವಾತಂತ್ರ್ಯ ದಿನದಂದೇ ಶೂಟೌಟ್‌ : 6 ಮಂದಿಯ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಮೆರಿಕ ಸ್ವಾತಂತ್ರ್ಯ ದಿನಾಚರಣೆಯ ಪರೇಡ್‌ ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ 6 ಮಂದಿ ಮೃತರಾಗಿದ್ದಾರೆ. 36 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಚಿಕಾಗೋ ಉಪನಗರವಾದ ಹೈಲ್ಯಾಂಡ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯೋತ್ಸವದ ಪರೇಡ್‌ನ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವುದಾಗಿ ಮೂಲಗಳು ವರದಿ ಮಾಡಿವೆ. ಈ ಸಂಬಂಧ ರಾಬರ್ಟ್ ಇ. ಕ್ರಿಮೊ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಪರೇಡ್‌ ನಡೆಯುತ್ತಿದ್ದ ಜಾಗದಲ್ಲಿ ಮೇಲ್ಛಾವಣಿಯೊಂದರ ಮೇಲಿಂದ ಕ್ರೀಮೋ ಎಂಬಾತ ಗುಂಡಿನ ದಾಳಿ ನಡೆಸಿ 6 ಜನರ ಸಾವಿಗೆ ಕಾರಣವಾಗಿದ್ದಾನೆ.

ಆತನ ವಿರುದ್ಧ ಹೈ ಲ್ಯಾಂಡ್‌ ಪೋಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss